ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಆಂತರಿಕ ಚುನಾವಣೆಗೆ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಡಿಸೆಂಬರ್ 7 ರಂದು ಚುನಾವಣೆ ನಡೆಯಲಿದೆ. ಆದರೆ ರಾಹುಲ್ ಹೊರತಾಗಿ ಬೇರೆ ಯಾರೂ ನಾಮಪತ್ರ ಸಲ್ಲಿಸುವ ಸಾಧ್ಯತೆ ಕಡಿಮೆ. ಹೀಗಾಗಿ ರಾಹುಲ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ನ ಘಟಾನುಘಟಿ ನಾಯಕರೆಲ್ಲರೂ ಉಪಸ್ಥಿತರಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಪಂಜಾಬ್ ಸಿಎಂ ಕ್ಯಾ. ಅಮರೀಂದರ್ ಸಿಂಗ್, ಸೇರಿದಂತೆ ಬಹುತೇಕ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಹಿರಿಯ ಕಾಂಗ್ರೆಸ್ ನಾಯಕರಾದ ಎಕೆ ಆಂಟನಿ, ಅಹಮ್ಮದ್ ಪಟೇಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಘಟಾನುಘಟಿಗಳು ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವರಾಜನಿಗೆ ಸಾಥ್ ಕೊಡಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ