ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಕಾಂಗ್ರೆಸ್ ಚುನಾವಣೆ ಸಮಿತಿ ಅಧಿಕೃತವಾಗಿ ಘೋಷಿಸಿದೆ.
ರಾಹುಲ್ ಗಾಂಧಿ ನೆಹರು, ಗಾಂಧಿ ಕುಟುಂಬದ 6ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ, ಮೋತಿಲಾಲ್ ನೆಹರು, ಜವಾಹರ ಲಾಲ್ ನೆಹುರು, ಇಂದಿರಾಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ ನಂತರ ರಾಹುಲ್ ಪಟ್ಟಕ್ಕೇರಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದಿರುವ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿಯವರನ್ನು ಅವಿರೋಧ ಆಯ್ಕೆ ಎಂದು ಘೋಷಿಸಲಾಗಿದೆ.
2004ರಿಂದಲು ಸಕ್ರಿಯ ರಾಜಕಾರಣದಲ್ಲಿರುವ ರಾಹುಲ್, ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಸೋನಿಯಾ ಗಾಂಧಿ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಹುಲ್ಗೆ ಪಟ್ಟ ಒಲಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.