ಶ್ರೀನಗರ(ಆ.09): ವಿಧಾನಸಭೆ ಚುನಾವಣೆ ಆರಂಭವಾಗುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಚುರುಕುಗೊಳ್ಳುತ್ತಿವೆ. ಸದ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ದಿನಗಳ ಕಣಿವೆ ನಾಡಿನ ಪ್ರವಾಸ ಕೈಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಇಂದು, ಸೋಮವಾರ ಸಂಜೆ ಶ್ರೀನಗರ ತಲುಪಲಿದ್ದಾರೆ. 370 ನೇ ವಿಧಿಯನ್ನು ತೆಗೆದು ಹಾಕಿದ ಬಳಿಕ ಇದು ರಾಹುಲ್ ಗಾಂಧಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದೆ. ಈ ವರ್ಷದ ಅಂತ್ಯದ ವೇಳೆಗೆ ಅಥವಾ 2022 ರ ಆರಂಭದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅಂದರೆ, ಮುಂದಿನ ವರ್ಷ ಮಾರ್ಚ್ ವೇಳೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಗಳನ್ನು ನಡೆಸಬಹುದು. ಇದಕ್ಕಾಗಿ ಡಿಲಿಮಿಟೇಶನ್ ಕೆಲಸವು ಅಂತಿಮ ಹಂತದಲ್ಲಿದೆ.