Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜೈಪುರ : ರಾಜಸ್ಥಾನದಲ್ಲಿ ಪುರುಷರ ಸಂಖ್ಯೆ ಹೆಚ್ಚಾಗಿದ್ದು, ರಾಜ್ಯ ಅತ್ಯಾಚಾರ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ರಾಜಸ್ಥಾನ ಸಂಸದೀಯ ವ್ಯವಹಾರಗಳ ಸಚಿವ ಶಾಂತಿ ಧರಿವಾಲ್ ಹೇಳಿದ್ದಾರೆ.
ಅತ್ಯಾಚಾರ ಪ್ರಕರಣಗಳಲ್ಲಿ ನಮ್ಮ ರಾಜ್ಯ ನಂಬರ್ ಒನ್ ಆಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ನಮ್ಮ ರಾಜ್ಯ ಏಕೆ ಮುಂದಿದೆ ಎಂಬುವುದರಲ್ಲಿ ಯಾವುದೇ ಸಂದೇಹವಿಲ್ಲ. ಏಕೆಂದರೆ ರಾಜಸ್ಥಾನವು ಪುರುಷರು ಹೆಚ್ಚಾಗಿರುವ ರಾಜ್ಯವಾಗಿದೆ ಎಂದು ಹೇಳಿದ್ದಾರೆ.
ಶಾಂತಿ ಧರಿವಾಲ್ ಅವರ ಅತ್ಯಾಚಾರ ಹೇಳಿಕೆ ಇದೀಗ ಭಾರೀ ವಿವಾದವನ್ನು ಸೃಷ್ಟಿಸಿದ್ದು, ರಾಜಸ್ಥಾನದ ಬಿಜೆಪಿ ಮುಖ್ಯಸ್ಥ ಸತೀಶ್ ಪೂನಿಯಾ, ವಕ್ತಾರ ಶೆಹಜಾದ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲೂ) ಅಧ್ಯಕ್ಷೆ ರೇಖಾ ಶರ್ಮಾ ಖಂಡಿಸಿದ್ದಾರೆ.
ರಾಜಸ್ಥಾನ ಅಸೆಂಬ್ಲಿಯಲ್ಲಿ ಮಾತನಾಡಿದ ಶಾಂತಿ ಧರಿವಾಲ್ ಅವರ ಈ ವೀಡಿಯೋವನ್ನು ಶೆಹಜಾದ್ ಅವರು ತಮ್ಮ ಟ್ವಿಟ್ಟರ್ನಲ್ಲಿ ಶೇರ್ ಮಾಡಿಕೊಂಡಿದ್ದು, ಜೊತೆಗೆ ಆಘಾತಕಾರಿ, ಅಸಹ್ಯಕರ, ಆದರೆ ಆಶ್ಚರ್ಯಕರವಲ್ಲ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ ಶಾಂತಿ ಧರಿವಾಲ್ ಅತ್ಯಾಚಾರವನ್ನು ಕಾನೂನುಬದ್ಧಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.