Publish Date: Mon, 04 Jul 2022 (15:51 IST)
Updated Date: Mon, 04 Jul 2022 (15:10 IST)
ನಗರದ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಆರ್.ಶ್ರೀನಿವಾಸ್ ವಿರುದ್ಧದ ಅತ್ಯಾಚಾರ, ಜೀವ ಬೆದರಿಕೆ ಆರೋಪದಡಿ ದಾಖಲಾಗಿರುವ ದೂರನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಸ್ವತಃ ಆರೋಪಿ ಇನ್‌ಸ್ಪೆಕ್ಟರ್ ಟಿ.ಆರ್. ಶ್ರೀನಿವಾಸ್ ಅವರ ಪತ್ನಿ ಮುಬಶಿರಾ ಅವರೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪೊಲೀಸ್ ಮಹಾನಿದೇಶಕರು, ನಗರ ಪೊಲೀಸ್ ಆಯುಕ್ತರು, ಸಿಬಿಐ, ಜೆ.ಸಿ. ನಗರ ಠಾಣಾ ಇನ್‌ಸ್ಪೆಕ್ಟರ್ ಮತ್ತು ಟಿ.ಆರ್.ಶ್ರೀನಿವಾಸ್‌ಗೆ ನೋಟಿಸ್ ಜಾರಿ ಮಾಡಿದೆ.