Publish Date: Sat, 11 Sep 2021 (16:41 IST)
Updated Date: Sat, 11 Sep 2021 (16:42 IST)
ಮುಂಬೈ: ನಿರ್ಭಯಾ ಮಾದರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಖಾಸಗಿ ಅಂಗಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಪೈಶಾಚಿಕ ಕೃತ್ಯ ಮೆರೆದ ಘಟನೆ ಮುಂಬೈನಲ್ಲಿ ವರದಿಯಾಗಿತ್ತು. ಆ ಮಹಿಳೆ ಇದೀಗ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ತೀವ್ರ ಅಸ್ವಸ್ಥಳಾಗಿದ್ದ ಮಹಿಳೆಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದದ್ದಾಳೆ ಎಂದು ತಿಳಿದುಬಂದಿದೆ.
ಮೊನ್ನೆ ನಿರ್ಭಯಾ ಮಾದರಿಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆದಿತ್ತು. ಕೃತ್ಯವೆಸಗಿದ ಬಳಿಕ ಸಂತ್ರಸ್ತೆಯನ್ನು ಟೆಂಪೋವೊಂದರಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದ. ಸ್ಥಳೀಯರು ಮಹಿಳೆಯನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಘಟನೆ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.