Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಕಾರಿ ಗೌರವದೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ, ಮಹಾರಾಷ್ಟ್ರದಲ್ಲಿ ಶೋಕಾಚರಣೆ: ಶಿಂಧೆ

ಸರ್ಕಾರಿ ಗೌರವದೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ, ಮಹಾರಾಷ್ಟ್ರದಲ್ಲಿ ಶೋಕಾಚರಣೆ: ಶಿಂಧೆ

Sampriya

ಮುಂಬೈ , ಗುರುವಾರ, 10 ಅಕ್ಟೋಬರ್ 2024 (09:50 IST)
Photo Courtesy X
ಮುಂಬೈ: ಬುಧವಾರ ತಡರಾತ್ರಿ ನಿಧನರಾದ ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ತಿಳಿಸಿದ್ದಾರೆ.

ಟಾಟಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಗುರುವಾರ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ದಕ್ಷಿಣ ಮುಂಬೈನ ರಾಷ್ಟ್ರೀಯ ಲಿಲಿತ ಕಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರಿಗೆ 11.30 ಗಂಟೆಗೆ ಅವರು ನಿಧನರಾದರು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಶಿಂದೆ, ಟಾಟಾ ಎಂದರೆ ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ. 150 ವರ್ಷಗಳ ಹಳೆಯದಾದ ಟಾಟಾ ಸಮೂಹವನ್ನು ಯಶಸ್ವಿಯಾಗಿ ಮುನ್ನಡೆಸಿದ ಜೀವಂತ ದಂತಕಥೆಯಾಗಿದ್ದರು. ಟಾಟಾ ಅವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ರಾಜ್ಯದಲ್ಲಿ ಇಂದು ಒಂದು ದಿನದ ಶೋಕಾಚರಣೆ ಇರಲಿದ್ದು, ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಶಿಂದೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

Ratan Tata passed away: ಭಾರತದ ರತನ್ ಟಾಟಾ ಇನ್ನಿಲ್ಲ