Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪುಣೆ ನಗರದ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಟ್ರಂಕ್ ಟೆಂಪೋಗೆ ಢಿಕ್ಕಿಯಾಗಿದೆ. ಈ ವೇಳೆ ಟೆಂಪೋದಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಗಾಯಗೊಂಡವರಲ್ಲಿ ಒಬ್ಬನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಇಬ್ಬರು ವಾಹನದೊಳಗೆ ಸಿಲುಕಿಕೊಂಡಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಸ್ತುತ ಸತಾರಾದಿಂದ ಮುಂಬೈ ಕಡೆಗೆ ಏಕಮುಖ ಸಂಚಾರವನ್ನು ಮುಚ್ಚಲಾಗಿದೆ.