Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಆಸ್ಸಾಂ ಭರ್ಜರಿ ಗೆಲುವಿನ ನಂತ್ರ ಉತ್ತರಪ್ರದೇಶದತ್ತ ಬಿಜೆಪಿ ಕಣ್ಣು

ಆಸ್ಸಾಂ ಭರ್ಜರಿ ಗೆಲುವಿನ ನಂತ್ರ ಉತ್ತರಪ್ರದೇಶದತ್ತ ಬಿಜೆಪಿ ಕಣ್ಣು
ನವದೆಹಲಿ , ಮಂಗಳವಾರ, 24 ಮೇ 2016 (13:58 IST)
ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಬಿಜೆಪಿ, ಇದೀಗ ಉತ್ತರಪ್ರದೇಶ ರಾಜ್ಯವನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿದೆ.
 
ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಅಲಹಾಬಾದ್‌‌ ನಗರದಲ್ಲಿ ಜೂನ್ 12-13 ರಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ತೀರ್ಮಾನಿಸಿದೆ.
 
ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಅಲಹಾಬಾದ್ ಜಿಲ್ಲೆ ಇದೀಗ ಸಮಾಜವಾದಿ ಪಕ್ಷದ ಭದ್ರ ಕೋಟೆಯಾಗಿದೆ.
 
ಎರಡು ದಿನಗಳ ಕಾಲ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು ಮತ್ತು ಎಲ್ಲಾ ರಾಜ್ಯಗಳ ಬಿಜೆಪಿ ಘಟಕಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ.  
 
ಏತನ್ಮಧ್ಯೆ, ಮುಲಾಯಸಿಂಗ್ ಸರಕಾರದಲ್ಲಿ ಸಚಿವರಾಗಿದ್ದ ಸಮಾಜವಾದಿ ಪಕ್ಷದ ಮುಖಂಡ ಜಗದೀಶ್ ರಾಣಾ, ಸಮಾಜವಾದಿ ಪಕ್ಷವನ್ನು ತೊರೆದು ಉತ್ತರಪ್ರದೇಶದ ರಾಜ್ಯಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 
 
ವಿರೋಧ ಪಕ್ಷಗಳಲ್ಲಿರುವ ಇತರ ನಾಯಕರು ಕೂಡಾ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಕನ್ಯತ್ವ ಪರೀಕ್ಷೆಯಲ್ಲಿ ಪಾಸಾಗಿದ್ದರೂ ಕಿರುಕುಳ ನೀಡುತ್ತಿದ್ದ ಪತಿಯ ಬಂಧನ