ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, 9 ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಹಾಗೂ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಮೇರೆಗೆ ನಿನ್ನೆ ಚಟರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಇಂದು ಬಂಧನಕ್ಕೊಳಪಡಿಸಿದೆ.
ಪ್ರಸ್ತುತ ಕೈಗಾರಿಕಾ ಮತ್ತು ವಾಣಿಜ್ಯ ಸಚಿವರಾಗಿರುವ ಪಾರ್ಥ ಚಟರ್ಜಿ ಅವರು ಈ ಹಿಂದೆ ಶಿಕ್ಷಣ ಸಚಿವರಾಗಿದ್ದಾಗ ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದಿಂದ (WBSSC) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಿರುವುದಾಗಿ ಆರೋಪಿಸಲಾಗಿದೆ.