ನವದೆಹಲಿ : ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಉದಯ್ ಲಲಿತ್ ಅವರಿದ್ದ ತ್ರಿಸದಸ್ಯ ಪೀಠ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿದೆ.
ಕಾನೂನನ್ನು ಉಲ್ಲಂಘಿಸಿ 10 ವರ್ಷಗಳ ಕಾಲ ಏಕಾಂಗಿಯಾಗಿ ಬೆಳಗಾವಿ ಜೈಲಿನಲ್ಲಿ ಇರಿಸಲಾಗಿದೆ. ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ. ಹೀಗಾಗಿ ಈತನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡಿಸಲಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.