ನವದೆಹಲಿ : ಅದಾನಿ ಗ್ರೂಪ್ನ ವರದಿ ನಂತರ ಅಮೆರಿಕ ಮೂಲದ ಹಿಂಡೆನ್ಬರ್ಗ್ ರಿಸರ್ಚ್ ಇದೀಗ ಮಾಜಿ ಟ್ವಿಟ್ವರ್ ಸಿಇಒ ಹಾಗೂ ಸಂಸ್ಥಾಪಕ ಜಾಕ್ ಡಾರ್ಸೆ ಸ್ಥಾಪಿಸಿದ ಪೇಮೆಂಟ್ ಕಂಪನಿಯಾದ ಬ್ಲಾಕ್ ವಿರುದ್ಧ ಹೊಸ ವರದಿಯನ್ನು ಬಿಡುಗಡೆ ಮಾಡಿದೆ.
ಹಿಂಡೆನ್ಬರ್ಗ್ ರಿಸರ್ಚ್ ಇದೀಗ ಬಿಡುಗಡೆ ಮಾಡಿರುವ ವರದಿಯಲ್ಲಿ ಬ್ಲಾಕ್ ಇಂಕ್ನ ಮೇಲೆ ಕಣ್ಣಿಟ್ಟಿದ್ದೆವು. ಈ ಹಿಂದೆ ಬ್ಲಾಕ್ ಇಂಕ್ ಕಂಪನಿಯನ್ನು ಅನ್ನು ಹಿಂದೆ ಸ್ಕ್ವೇರ್ ಇಂಕ್ ಎಂದು ಕರೆಯಲಾಗುತ್ತಿತ್ತು. ಬ್ಲಾಕ್ ಕಂಪನಿಯಲ್ಲಿ ಹಲವಾರು ಅವ್ಯವಹಾರಗಳು ನಡೆದಿವೆ.
ಈ ಕಂಪನಿಯು ಹೂಡಿಕೆದಾರರಿಗೆ ತನ್ನ ಅಂಕಿ ಅಂಶಗಳ ಮಾಹಿತಿಯನ್ನು ತಪ್ಪಾಗಿ ಬಿಂಬಿಸುತ್ತಿದೆ. ಬ್ಲಾಕ್ನಲ್ಲಿರುವ ಖಾತೆಗಳು 40 – 75% ನಕಲಿಯಾಗಿದೆ. ಈ ಬಗ್ಗೆ 2 ವರ್ಷಗಳ ತನಿಖೆ ನಡೆಸಿರುವುದಾಗಿ ತಿಳಿಸಿದೆ.