ವರದಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಬ್ಲಾಕ್ನ ಷೇರು ದರ 20% ಕುಸಿದಿದೆ. ಜಾಕ್ ಡೋರ್ಸೆ ಒಡೆತನದ ಬ್ಲಾಕ್ ಕಂಪನಿಯು ಮೊಬೈಲ್ ಪೇಮೆಂಟ್ ಕಂಪನಿಯಾಗಿದ್ದು, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಇದರ ಷೇರು ದರದಲ್ಲಿ 639% ಏರಿಕೆಯಾಗಿತ್ತು.
ಈ ಹಿಂದೆ ಜನವರಿಯಲ್ಲಿ ಹಿಂಡೆನ್ಬರ್ಗ್ ಅದಾನಿ ಸಮೂಹ ಷೇರು ಮಾರುಕಟ್ಟೆಯಲ್ಲಿ ಅಕ್ರಮ ಎಸಗಿದೆ. ಅಕ್ರಮದ ಮೂಲಕ ತನ್ನ ಸಮೂಹದ ಕಂಪನಿಯ ಷೇರು ಬೆಲೆಯನ್ನು ಏರಿಕೆ ಮಾಡಿದ ಎಂದು ಆರೋಪಿಸಿ ವರದಿಯೊಂದನ್ನು ಬಿಡುಗಡೆ ಮಾಡಿತ್ತು.
ಷೇರಿನ ಮೌಲ್ಯ ಹೆಚ್ಚಿಸಲು ಹಲವಾರು ಶೆಲ್ ಕಂಪನಿಗಳನ್ನು ಬಳಸಿಕೊಂಡಿದೆ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು. ವರದಿಯ ಬೆನ್ನಲ್ಲೆ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದವು.