ನವದೆಹಲಿ : ದೇಶದಲ್ಲಿ ಸತತ 10 ದಿನಗಳಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿರುವ ಹಿನ್ನಲೆಯಲ್ಲಿ ಪ್ರಧಾನಿ ಮೋದಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪತ್ರ ಬರೆದಿದ್ದಾರೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಿದ್ದರೂ ಕೂಡ ದೇಶದಲ್ಲಿ 10 ದಿನಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 5.45ರೂ ಹಾಗೂ ಡಿಸೇಲ್ ದರ ಲೀಟರ್ ಗೆ 5.80 ರೂ. ಏರಿಕೆಯಾಗಿದೆ. ಈ ಕುರಿತು ಪ್ರಧಾನಿಗೆ ಪತ್ರ ಬರೆದ ಸೋನಿಯಾ ಗಾಂಧಿ, ಕೊರೊನಾ ಸಂಕಷ್ಟದ ನಡುವೆ ಜನರಿಗೆ ಬದುಕುವುದೇ ಕಷ್ಟವಾಗಿದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದೆ. ತಕ್ಷಣವೇ ತೈಲದರ ಏರಿಕೆ ಹಿಂಪಡೆಯಿರಿ ಎಂದು ಆಗ್ರಹಿಸಿದ್ದಾರೆ.