ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ಇಂದು ಕರೆಯಲಾಗಿರುವ ಸರ್ವಪಕ್ಷಗಳ ಸಭೆಗೆ ಹೆಚ್ಚು ಕಡಿಮೆ ಎಲ್ಲಾ ರಾಜಕೀಯ ಪಕ್ಷದ ನಾಯಕರಿಗೆ ಕರೆ ನೀಡಲಾಗಿದ್ದರೂ ಎಎಪಿ ಮತ್ತು ಆರ್ ಜೆಡಿ ಪಕ್ಷಗಳನ್ನು ಕಡೆಗಣಿಸಲಾಗಿದೆ.
ವಿಶೇಷವೆಂದರೆ ಮೋದಿ ವಿರುದ್ಧ ಸದಾ ಕೆಂಡಕಾರುವ ಟಿಎಂಸಿ ನಾಯಕಿ, ಪ.ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೂಡಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆದರೆ ಈ ಎರಡು ಪ್ರಾದೇಶಿಕ ಪಕ್ಷಗಳಿಗೆ ಆಹ್ವಾನವಿಲ್ಲ. ಈ ಬಗ್ಗೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಟ್ವಿಟರ್ ಮೂಲಕ ಟೀಕೆ ಮಾಡಿದ್ದಾರೆ.
ಇಂದು ಸಂಜೆ 5 ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಮುಖ ಸೇನಾಧಿಕಾರಿಗಳೂ ಪಾಲ್ಗೊಳ್ಳಲಿದ್ದು, ಪ್ರಧಾನಿ ಮೋದಿ ಚೀನಾ-ಭಾರತ ಸಂಘರ್ಷದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸೂಕ್ಷ್ಮವಾಗಿ ವಿವರಿಸಲಿದ್ದಾರೆ.