ಕೇರಳದಲ್ಲಿ ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ನಿಷೇಧಿಸಿ ಸರ್ಕಾರ ಪುನಃ ಆದೇಶ ಹೊರಡಿಸಿದೆ. ಸರ್ಕಾರದ ಟ್ರಾವಂಕೋರ್ ದೇವಸ್ವಂ ಮಂಡಳಿ ತನ್ನ ನೂತನ ಆದೇಶದಲ್ಲಿ ಟಿಡಿಬಿ ಅಧೀನದ ದೇಗುಲಗಳಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಅಂತಾ ಹೇಳಿದೆ.