ರೂಪಾಯಿ ಮೌಲ್ಯ ಕುಸಿಯುತ್ತಿರುವುದರಿಂದ ವಿದೇಶಿ ವ್ಯಾಪಾರದಲ್ಲಿ ಸಮಸ್ಯೆ ಉದ್ಭವಿಸಬಹುದು ಎಂದು ಮನಗೊಂಡ ಕೇಂದ್ರ ಸರ್ಕಾರ ಎನ್ ಆರ್ ಐ ನೆರವು ಪಡೆಯವ ನಿರ್ಧಾರ ಮಾಡಿದೆ. ಈ ಬಗ್ಗೆ ಈಗಾಗಲೇ ಆರ್ಥಿಕ ಇಲಾಖೆ ಅಧಿಕಾರಿಗಳು ಹಾಗೂ ಸೆಂಟ್ರಲ್ ಬ್ಯಾಂಕ್ ಅಧಿಕಾರಿಗಳು ಚರ್ಚಿಸಿದ್ದಾರೆ ಎನ್ನಲಾಗಿದೆ.
ಈ ಯೋಜನೆಯ ಪ್ರಕಾರ ವಿದೇಶದಲ್ಲಿ ನೆಲೆಸಿರುವ ಭಾರತೀಯರಿಂದ ಸಹಾಯ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದು, ಬಾಂಡ್ ಖರೀದಿ ಹಾಗೂ ಡಾಲರ್ ಡೆಪಾಸಿಟ್ ಮಾಡುವಂತೆ ಮನವಿ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಮಾಹಿತಿ ನೀಡಲು ಆರ್.ಬಿ.ಐ ಒಪ್ಪುತ್ತಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.