Webdunia - Bharat's app for daily news and videos

Install App

ಜಯಲಲಿತಾ ಉತ್ತರಾಧಿಕಾರಿ ಇವರೇನಾ?

Webdunia
ಬುಧವಾರ, 7 ಡಿಸೆಂಬರ್ 2016 (15:00 IST)
ಜಯಲಲಿತಾ ಅವರ ನಿಧನದ ಬಳಿಕ ಎಐಡಿಎಂಕೆಯನ್ನು ಮುನ್ನಡೆಸುವ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಜತೆಗೆ ಅವರ ಆಪ್ತ ಸಖಿ ಶಶಿಕಲಾ ನಟರಾಜನ್ ತೆರವಾಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ಸಂಭಾಳಿಸಿ ಎಐಡಿಎಂಕೆಯನ್ನು ಮುನ್ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 
ಮುಂದಿನ ದಿನಗಳಲ್ಲಿ ಎಐಡಿಎಂಕೆ ಪಕ್ಷದಲ್ಲಿ ಶಶಿಕಲಾ ಬಹುದೊಡ್ಡ ಪಾತ್ರ ನಿರ್ವಹಿಸುವ ಸಾಧ್ಯತೆಗಳಿವೆ. ಜಯಲಲಿತಾ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯ ಕಾರ್ಯದರ್ಶಿ ಶೀಲಾ ಬಾಲಕೃಷ್ಣನ್ ಸಹಕಾರದೊಂದಿಗೆ ಶಶಿಕಲಾ ಅವರು ಮುಖ್ಯಮಂತ್ರಿ ಕಚೇರಿಗೆ ಸಂಬಂಧಿಸಿದ ವ್ಯವಹಾರಗಳನ್ನು ನಿರ್ವಹಿಸಿದ್ದಷ್ಟೇ ಅಲ್ಲ, ಪಕ್ಷಕ್ಕೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದರು.
 
ಇಷ್ಟು ವರ್ಷಗಳಲ್ಲಿ ಶಶಿಕಲಾ ಸರ್ಕಾರ ಅಥವಾ ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ನಿರ್ವಹಿಸಿಲ್ಲವಾದರೂ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದ ಅವರನ್ನು ಯಾರು ಪ್ರಶ್ನಿಸಿಲ್ಲ. ಜಯಾ ಆಪ್ತ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಕಾರ್ಯಭಾರ ವಹಿಸಿಕೊಂಡರೂ, ಪಕ್ಷದಲ್ಲಿ ಇನ್ನುಮುಂದೆ ನಡೆಯುವ ಆಟವೆಲ್ಲ ಶಶಿಕಲಾ ಅವರದೇ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. 
 
ಆದರೆ ಕೆಲ ರಾಜಕೀಯ ವಿಶ್ಲೇಷಕರ ಪ್ರಕಾರ ಅಕ್ರಮ ಆಸ್ತಿ ಆರೋಪವನ್ನೆದುರಿಸುತ್ತಿರುವ ಪಕ್ಷದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸುವುದು ಶಶಿಕಲಾರಿಗೆ ಅಷ್ಟು ಸುಲಭವಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments