Publish Date: Fri, 26 Jun 2020 (11:19 IST)
Updated Date: Fri, 26 Jun 2020 (11:21 IST)
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ಆಸ್ತಿ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಬಿಡುಗಡೆ ಬಗ್ಗೆ ವದಂತಿಗಳು ಹಬ್ಬಿದೆ.
ಶಶಿಕಲಾ ಆಗಸ್ಟ್ 14 ರಂದು ಬಿಡುಗಡೆಯಾಗಲಿದ್ದಾರೆ ಎಂಬ ವದಂತಿ ಹಬ್ಬಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ಸದ್ಯದಲ್ಲಿ ಆಕೆ ಬಿಡುಗಡೆಯಾಗುತ್ತಿಲ್ಲ ಎಂದಿದ್ದಾರೆ.
ಶಶಿಕಲಾ ಬಿಡುಗಡೆಯಾಗುತ್ತಿದ್ದಾರೆ ಎಂಬ ವದಂತಿ ಟ್ವಿಟರ್ ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಹಲವರು ಮೆಮೆಗಳ ಮೂಲಕ ಟ್ರೋಲ್ ಮಾಡಿದ್ದಾರೆ. ಆಗಸ್ಟ್ 14 ರಂದು ತಲೈವಾ ಸಿನಿಮಾಗಿಂತಲೂ ಮನರಂಜನೆ ಸಿಗಲಿದೆ ಎಂದು ತಮಾಷೆ ಮಾಡಿದ್ದಾರೆ. ಇನ್ನು ಕೆಲವರು ಶಶಿಕಲಾ ಬಿಡುಗಡೆಯಾಗುತ್ತಿದ್ದಂತೇ ತಮಿಳಿನಾಡಿನಲ್ಲಿ ಎಐಎಡಿಎಂಕೆ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ.