Webdunia - Bharat's app for daily news and videos

Install App

ತಮಗಿಷ್ಟ ಬಂದಾಗ ಚಿನ್ನಮ್ಮ ತಮಿಳುನಾಡು ಸಿಎಂ !

Webdunia
ಸೋಮವಾರ, 9 ಜನವರಿ 2017 (11:57 IST)
ಪಕ್ಷದ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಜವಾಬ್ದಾರಿಯನ್ನು ವಹಿಸಲು ಎಐಡಿಎಂಕೆ ಸಿದ್ಧವಾಗಿದೆ ಎಂದು ಪಕ್ಷದ ವಕ್ತಾರ ವಿ. ಮೈತ್ರೇಯನ್ ಸುಳಿವು ನೀಡಿದ್ದಾರೆ. 

 
ಮಾಧ್ಯಮದವೊಂದರ ಬಳಿ ಮಾತನ್ನಾಡುತ್ತಿದ್ದ ಮೈತ್ರೇಯನ್, ತಾವು ಯಾವಾಗ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬ ನಿರ್ಧಾರ ಚಿನ್ನಮ್ಮನಿಗೆ ಬಿಟ್ಟಿದ್ದು. ಈ ಕುರಿತು ನಾವೇನೂ ಹೇಳುವುದಿಲ್ಲ ಎಂದಿದ್ದಾರೆ. 
 
ಅವರ ಹೇಳಿಕೆ ಪಕ್ಷ ಆಡಳಿತದಲ್ಲಿದ್ದಾಗ ಪ್ರಧಾನ ಕಾರ್ಯದರ್ಶಿಯನ್ನೇ ಮುಖ್ಯಮಂತ್ರಿಯನ್ನಾಗಿಸುವ ಎಐಡಿಂಕೆ ಪಕ್ಷದ ಎಐಎಡಿಎಂಕೆ ಸಂಪ್ರದಾಯದ ದೃಷ್ಟಿಯಲ್ಲಿ ಮಹತ್ವ  ಪಡೆದಿದೆ.
 
ತಮಿಳುನಾಡು ಜನರ ಪಾಲಿನ ಅಮ್ಮ ಜಯಲಲಿತಾ ಹೃದಯಾಘಾತದಿಂದ ನಿಧನರಾದ ಬಳಿಕ ರಾಜ್ಯ ರಾಜಕಾರಣ ದಿನೇ ದಿನೇ ಕುತೂಹಲವನ್ನು ಕೆರಳಿಸುತ್ತಿದೆ. ಜಯಾ ಪರಮಾಪ್ತ ಪನ್ನೀರ್ ಸೆಲ್ವಂ ಮುಖ್ಯಮಂತ್ರಿಯಾಗಿ ಕಾರ್ಯಭಾರ ನಡೆಸುತ್ತಿದ್ದಾರೆ. ಆದರೆ ಅವಿರೋಧವಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಜಯಾ ಆಪ್ತ ಗೆಳತಿ ಶಶಿಕಲಾ ನಟರಾಜನ್ ರಾಜ್ಯದ ಗದ್ದುಗೆ ಏರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಓಡಾಡುತ್ತಿದೆ. 
 
ಇತ್ತ, ತಮಿಳುನಾಡು ಸರ್ಕಾರದ ಚುಕ್ಕಾಣಿ ಹಿಡಿಯುವ ಸಲುವಾಗಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಪಕ್ಷದ ಬೆಂಬಲ ಪಡೆಯುವಲ್ಲಿ ನಿರತರಾದ ಬೆನ್ನಲ್ಲೇ, ಅವರಿಗೆ ಸೆಡ್ಡು ಹೊಡೆಯಲು ಜಯಲಲಿತಾ ಅವರ ಸೋದರನ ಮಗಳು ದೀಪಾ ಜಯಕುಮಾರ್ ಸಿದ್ಧತೆ ನಡೆಸಿದ್ದಾರೆ. ಎಐಎಡಿಎಂಕೆ ಪಕ್ಷದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ರಾಜಕೀಯ ಪ್ರವೇಶಿಸಲು ದೀಪಾ ನಿರ್ಧರಿಸಿದ್ದಾರೆ.
 
 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments