ಮುಂಬೈ : ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಲಾಭಾಂಶದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯನ್ನು ಹಿಂದಿಕ್ಕಿ ದೇಶದಲ್ಲೇ ಅತಿ ಹೆಚ್ಚು ಲಾಭಾಂಶ ದಾಖಲಿಸಿದ ಕಂಪನಿಯಾಗಿ ಹೊರಹೊಮ್ಮಿದೆ.
2023-24ರ ಹಣಕಾಸು ವರ್ಷದ ಏಪ್ರಿಲ್ ಜೂನ್ ಅವಧಿಯ ಮೊದಲ ತ್ರೈಮಾಸಿಕದಲ್ಲಿ ಎಸ್ಬಿಐ 18,537 ಕೋಟಿ ರೂ. ನಿವ್ವಳ ಲಾಭ ದಾಖಲಿಸಿದೆ. ಈ ಅವಧಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ 16,011 ಕೋಟಿ ರೂ. ಲಾಭ ದಾಖಲಿಸಿದೆ.