ವಿವಿಧ ಸೇವೆಗಳನ್ನು ಮತ್ತು ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಪಡೆಯುವ ಸಲುವಾಗಿ ಆಧಾರ್ ಕಡ್ಡಾಯವಾಗೊಳಿಸಿರುವ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ, ಸಲ್ಲಿಸಿದ ಅರ್ಜಿಗಳ ವಿಚಾರಣೆಗಾಗಿ ಪ್ರತ್ಯೇಕ ಸಂವಿಧಾನ ಪೀಠವನ್ನು ರಚಿಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಕೆ.ಖಾನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ನವೆಂಬರ್ ಕೊನೆಯ ವಾರದಲ್ಲಿ ಪ್ರತ್ಯೇಕ ಪೀಠದಲ್ಲಿ ಆಧಾರ ಕಡ್ಡಾಯ ವಿರುದ್ಧದ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ಜಾರೆ.
ಇದಕ್ಕಿಂತ ಮೊದಲು, ವಿವಿಧ ಸಮಾಜ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವುದಕ್ಕಾಗಿ ಆಧಾರ್ ಕಡ್ಡಾಯ ಮಾಡಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರಕಾರ ಅರ್ಜಿ ಸಲ್ಲಿಸಿ ಪ್ರಶ್ನಿಸಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಸಂಸತ್ತಿನ ಬಹುಮತದ ನಿರ್ಣಯವನ್ನು ರಾಜ್ಯ ಸರಕಾರ ಹೇಗೆ ಪ್ರಶ್ನಿಸಲು ಸಾಧ್ಯ ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಧಾರ ಕಡ್ಡಾಯಗೊಳಿಸಿರುವುದಕ್ಕೆ ವಿರೋಧವಾಗಿದ್ದಲ್ಲಿ ವೈಯಕ್ತಿಕವಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿ ಎಂದು ಸುಪ್ರೀಂಕೋರ್ಟ್ ಸಲಹೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.