ಲಕ್ನೋ : ಉತ್ತರ ಪ್ರದೇಶದ ಮದರಸಾಗಳಲ್ಲಿ 1 ರಿಂದ 8 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ.
ಪ್ರತಿ ಶೈಕ್ಷಣಿಕ ವರ್ಷ ನೀಡಲಾಗುತ್ತಿದ್ದ ಸ್ಕಾಲರ್ಶಿಪ್ ಗೆ ಈ ಬಾರಿ ತಡೆ ಹಾಕಿದೆ. ಈವರೆಗೂ 1 ರಿಂದ 5 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ 1,000 ರೂ. ಶಿಷ್ಯವೇತನವನ್ನು ನೀಡಲಾಗುತ್ತಿತ್ತು.
6 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿವಿಧ ಕೋರ್ಸ್ಗಳ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿತ್ತು.
ಕೇಂದ್ರ ಸರ್ಕಾರದ ಪ್ರಕಾರ, ಶಿಕ್ಷಣ ಹಕ್ಕು ಕಾಯ್ದೆಯಡಿ 1 ರಿಂದ 8 ನೇ ತರಗತಿವರೆಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಮದರಸಾಗಳಲ್ಲಿ ಮಧ್ಯಾಹ್ನದ ಊಟ ಮತ್ತು ಪುಸ್ತಕಗಳನ್ನು ಕೂಡ ಉಚಿತವಾಗಿ ನೀಡಲಾಗುತ್ತಿದೆ.