Publish Date: Fri, 12 Aug 2022 (11:01 IST)
Updated Date: Fri, 12 Aug 2022 (08:02 IST)
ನವದೆಹಲಿ: 8 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಐವರು ದುರುಳರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
ಅಲ್ಲದೆ, ಬಾಲಕಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಹೋದರನನ್ನು ಥಳಿಸಿದ್ದಾರೆ. ದೇವಾಲಯಕ್ಕೆ ತೆರಳಿ ಮನೆಗೆ ಮರಳುತ್ತಿದ್ದಾಗ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ.
ಈ ಬಗ್ಗೆ ಯಾರಿಗೂ ಬಾಯ್ಬಿಡದಂತೆ ಸಹೋದರನಿಗೆ ಕೊಲೆ ಬೆದರಿಕೆ ಹಾಕಲಾಗಿತ್ತು. ಘಟನೆ ತಿಳಿಯುತ್ತಿದ್ದಂತೇ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.