Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸುಪ್ರೀಂನಲ್ಲಿ ಕಾವೇರಿ ವಿವಾದ ವಿಚಾರಣೆ: ರಾಜಧಾನಿಯಲ್ಲಿ ನಿಷೇಧಾಜ್ಞೆ

ಸುಪ್ರೀಂನಲ್ಲಿ ಕಾವೇರಿ ವಿವಾದ ವಿಚಾರಣೆ: ರಾಜಧಾನಿಯಲ್ಲಿ ನಿಷೇಧಾಜ್ಞೆ
ಬೆಂಗಳೂರು , ಮಂಗಳವಾರ, 27 ಸೆಪ್ಟಂಬರ್ 2016 (10:57 IST)
ಕಾವೇರಿ ನದಿ ನೀರು ವಿವಾದದ ಬಗ್ಗೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 
 
ಮುನ್ನೆಚ್ಚರಿಕೆಯಾಗಿ ಮುಂಜಾನೆ 6 ಗಂಟೆಯಿಂದ ಮಧ್ಯರಾತ್ರಿ 12ಗಂಟೆಯರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ನಗರ ಪೊಲೀಸ್ ಆಯುಕ್ತ ಮೇಘರಿಕ್ ಸ್ಪಷ್ಟ ಪಡಿಸಿದ್ದಾರೆ. 
 
ಸುಪ್ರೀಂ ತೀರ್ಪನ್ನು ಆಧರಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ನಗರದಾದ್ಯಂತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಭದ್ರತೆಗಾಗಿ 14 ಅರೆಸೇನಾ ತುಕಡಿ, 40 ಕೆಎಸ್‌ಆರ್‌ಪಿ, ಸಿಎಆರ್ ತುಕಡಿಯನ್ನು ನೇಮಿಸಲಾಗಿದೆ
 
ಇಂದು ಮಧ್ಯಾಹ್ನ 2 ಗಂಟೆಗೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠದಲ್ಲಿ ನ್ಯಾಯಮೂರ್ತಿ ದೀಪಕ್ ಮಿಶ್ರಾ ಉದಯ್ ಲಲಿತ್ ಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಪುಟ್ಟ ಮಗಳ ಕೈಯ್ಯಲ್ಲಿ ಎಕೆ 47 ಕೊಟ್ಟು ಮೋದಿಯನ್ನು ಕೆಣಕಿದ ಪಾಕ್ ಪ್ರಜೆ