Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : ಪ್ರಧಾನಿ ನರೇಂದ್ರ ಮೋದಿ ಫಿಟ್ ಇಂಡಿಯಾ ಬಗ್ಗೆ ಅರಿವು ಮೂಡಿಸಲು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದೆ.
ನರೇಂದ್ರ ಮೋದಿ ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕಿ, ವಿಶ್ವದರ್ಜೆಯಲ್ಲಿ ಅಥ್ಲೆಟಿಕ್ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂಬುದು ಅವರ ಬಹುದೊಡ್ಡ ಆಸೆಯಾಗಿದೆ.
ಈ ಹಿನ್ನೆಲೆ ಇಂದು ಮೋದಿ ಅವರು ಉತ್ತರ ಪ್ರದೇಶದ ಮೀರತ್ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಅಡಿಪಾಯ ಹಾಕಿದರು.
ಈ ವಿಶ್ವವಿದ್ಯಾಲಯವನ್ನು ಮೀರತ್ನ ಸರ್ಧಾನ ಪಟ್ಟಣದ ಸಲಾವಾ ಮತ್ತು ಕೈಲಿ ಪ್ರದೇಶಗಳಲ್ಲಿ 700 ಕೋಟಿ ರೂ. ಗಳಲ್ಲಿ ನಿರ್ಮಿಸಲು ಯೋಜಿಸಲಾಗಿದೆ.
ಸಂಸ್ಥೆಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಜಿಮ್ಗೆ ತೆರಳಿದ ಮೋದಿ ಅವರು ದೇಶಾದ್ಯಂತ ಫಿಟ್ ಇಂಡಿಯಾ ಎಂಬ ಸಂದೇಶವನ್ನು ಹರಡುವ ಸಲುವಾಗಿ ಸ್ವತಃ ಅವರೇ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ.