ನವದೆಹಲಿ: ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯಚೂರಿ ಪುತ್ರ ಆಶಿಶ್ ಕೊರೋನಾಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಗುರ್ಗಾಂವ್ ನ ಮೇದಾಂತಾ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಆಶಿಶ್ ಯಚೂರಿ, ಸೀತಾರಾಮ್ ಯಚೂರಿ ಅವರ ಹಿರಿಯ ಪುತ್ರ. ಈ ಬಗ್ಗೆ ಸ್ವತಃ ಸೀತಾರಾಮ್ ಯಚೂರಿ ಟ್ವೀಟ್ ಮಾಡಿದ್ದಾರೆ.
ನನ್ನ ಪುತ್ರ ಆಶಿಶ್ ಕೊವಿಡ್ ನಿಂದ ಮೃತಪಟ್ಟಿದ್ದಾನೆಂದು ತಿಳಿಸಲು ದುಃಖವಾಗುತ್ತಿದೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ನರ್ಸ್ ಗಳು ಹಾಗೂ ಈ ಹೋರಾಟದಲ್ಲಿ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.