Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇನ್ಮುಂದೆ ಹೋಟೆಲ್, ರೆಸ್ಟೋರೆಂಟ್‍ಗಳಲ್ಲಿ ಸೇವಾ ಶುಲ್ಕ ವಿಧಿಸಬಹುದು

ಇನ್ಮುಂದೆ  ಹೋಟೆಲ್,  ರೆಸ್ಟೋರೆಂಟ್‍ಗಳಲ್ಲಿ ಸೇವಾ ಶುಲ್ಕ ವಿಧಿಸಬಹುದು
ನವದೆಹಲಿ , ಶನಿವಾರ, 20 ಆಗಸ್ಟ್ 2022 (09:11 IST)
ನವದೆಹಲಿ : ಮುಂದಿನ ವಿಚಾರಣೆವರೆಗೂ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಸೇವಾ ಶುಲ್ಕ ವಿಧಿಸುವುದನ್ನು ಮುಂದುವರಿಸಬಹುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ.
 
ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರೆಸ್ಟೋರೆಂಟ್ ಸಂಸ್ಥೆಗಳಿಗೆ ನೋಟಿಸ್ ನೀಡಿ ಈ ಮಹತ್ವದ ಸೂಚನೆ ನೀಡಿದೆ.

ಕಳೆದ ಜೂನ್ನಲ್ಲಿ ಗ್ರಾಹಕ ವ್ಯವಹಾರಗಳ ಸಚಿವಾಲಯವು, ಬಿಲ್ಗಳಲ್ಲಿ ಸೇವಾ ಶುಲ್ಕವನ್ನು ಕಡ್ಡಾಯವಾಗಿ ವಿಧಿಸುವುದನ್ನು ನಿಲ್ಲಿಸುವಂತೆ ಹೋಟೆಲ್, ರೆಸ್ಟೋರೆಂಟ್ ಸಂಘಗಳಿಗೆ ಸೂಚಿಸಿತ್ತು. ಇದು ಕಾನೂನುಬಾಹಿರ ಚಟುವಟಿಕೆ ಎಂದಿದ್ದ ಇಲಾಖೆ ಈ ಪದ್ಧತಿಯನ್ನು ಕೊನೆಗೊಳಿಸಲು ಕಾನೂನು ಚೌಕಟ್ಟನ್ನು ಹೊರತರುವುದಾಗಿಯೂ ಹೇಳಿತ್ತು. 

ಈ ಆದೇಶವನ್ನು ಪ್ರಶ್ನೆ ಮಾಡಿ, ರೆಸ್ಟೋರೆಂಟ್ ಮತ್ತು ಹೋಟೆಲ್ ಮಾಲೀಕರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ ಸರ್ಕಾರ ನಿರ್ಧಾರವನ್ನು ತಡೆ ಹಿಡಿದಿತ್ತು.

ಸದ್ಯ ಈ ಆದೇಶವನ್ನು ಪ್ರಶ್ನೆ ಮಾಡಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು  ಮೇಲ್ಮನವಿ ಅರ್ಜಿ ಸಲ್ಲಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ !