ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಆದಾಯ ತೆರಿಗೆ ಇಲಾಖೆ ತನಿಖೆ ನಡೆಸಲು ದೆಹಲಿ ಹೈಕೋರ್ಟ್ ಅಸ್ತು ಎಂದಿದೆ.
ಇದರಿಂದಾಗಿ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಸೋನಿಯಾ ಮತ್ತು ರಾಹುಲ್ ಪಾಲುದಾರರಾಗಿರುವ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಹಣಕಾಸಿನ ವ್ಯವಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಐಟಿ ತನಿಖೆ ನಡೆಸಬೇಕು ಎಂದು ಕೋರ್ಟ್ ಆದೇಶಿಸಿದೆ.
ಸೋನಿಯಾ ಮತ್ತು ರಾಹುಲ್ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆಂದು ಆರೋಪವಿದೆ. ಈ ಪ್ರಕರಣದಲ್ಲಿ ಸೋನಿಯಾ ಮತ್ತು ರಾಹುಲ್ ಅಲ್ಲದೆ ಕಾಂಗ್ರೆಸ್ ನ ಹಲವು ಪ್ರಮುಖ ನಾಯಕರ ಹೆಸರುಗಳೂ ಸೇರಿಕೊಂಡಿವೆ.
ಈ ಬಗ್ಗೆ ತನಿಖೆ ನಡೆಸಲು ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ಸಬ್ರಮಣಿಯನ್ ಸ್ವಾಮಿ ಖಾಸಗಿ ದೂರು ಸಲ್ಲಿಸಿದ್ದರು. 2015 ರಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯದ ಮುಂದೆ ಹಾಜರಾದ ಸೋನಿಯಾ ಮತ್ತು ರಾಹುಲ್ ಜಾಮೀನು ಪಡೆದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ