ನವದೆಹಲಿ : ಟಿವಿ ವರದಿಗಾರನೊಬ್ಬ ಪತ್ರಕರ್ತೆ ಮಹಿಳೆಯೊಬ್ಬಳನ್ನು ಅಪಹರಿಸಿ ಆಕೆಗೆ ದೈಹಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪವೊಂದು ಕೇಳಿಬಂದಿದೆ.
ರಿಪಬ್ಲಿಕ್ ಟಿವಿಯ ಅಸ್ಸಾಂ ಪ್ರತಿನಿಧಿ ಅನಿರುದ್ಧ್ ಬಕತ್ ಎಂಬುವವರು ಗುವಾಹಟಿ ಮೂಲದ ಪತ್ರಕರ್ತೆಯೊಬ್ಬಳನ್ನು ಅಪಹರಿಸಿ ಜೋಯ್ನಗರದಲ್ಲಿರುವ ಮನೆಯೊಂದರಲ್ಲಿ ಕೂಡಿ ಹಾಕಿ ಆಕೆಗೆ ದೈಹಿಕ ಹಾಗೂ ಲೈಂಗಿಕ ಕಿರುಕುಳ ನೀಡಿದ್ದಾರೆ. ನಂತರ ಆಕೆಯ ಸಹೋದ್ಯೋಗಿಗಳು ಆಕೆಯನ್ನು ರಕ್ಷಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತೆ ಬಕತ್ ವಿರುದ್ಧ ಗುವಾಹಟಿಯ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ಈ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 341, 392, 323,506 ಮತ್ತು 34ರ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆದರೆ ಬಂಧನದ ಎರಡು ದಿನಗಳ ನಂತರ ಆರೋಪಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಂತ್ರಸ್ತೆ ಪೊಲೀಸರು ಹೊರಗಿನ ಒತ್ತಡಕ್ಕೆ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸದೆಯೇ ಬಿಡುಗಡೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.