ಮುಂಬೈ : ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ನ ಶಿವಸೇನಾ ಸದಸ್ಯನೊಬ್ಬ ಹಣದ ಆಸೆ ತೋರಿಸಿ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇದೀಗ ಆತನ ವಿರುದ್ಧ ದೂರು ದಾಖಲಾಗಿದೆ.
ಮುಂಬೈ ಶಿವಸೇನಾ ಕಾರ್ಪೋರೇಟರ್ ನಾಮ್ದೇವ್ ಭಗತ್(51 ವರ್ಷ) ಕಾಲೇಜ್ ವಿದ್ಯಾರ್ಥಿನಿವೋರ್ವಳಿಗೆ ಹಣಕಾಸಿನ ನೆರವು ನೀಡುವುದಾಗಿ ನಂಬಿಸಿ ದಘೋಡ್ ಗ್ರಾಮದಲ್ಲಿನ ತಮ್ಮ ತೋಟದ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ.
ಇನ್ನು ಆತನ ವಿರುದ್ಧ ವಿದ್ಯಾರ್ಥಿನಿ ಈಗಾಗಲೇ ದೂರು ದಾಖಲಿಸಿದ್ದು, ಐಪಿಸಿ ಸೆಕ್ಷನ್ 354ಯಡಿ ಈ ಪ್ರಕರಣ ದಾಖಲು ಮಾಡಲಾಗಿದೆ. ಅದರ ಅನ್ವಯ ತನಿಖೆ ನಡೆಸಲಾಗುತ್ತಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ