Webdunia - Bharat's app for daily news and videos

Install App

ಶರಬತ್‌ ಜಿಹಾದ್‌ ಹೇಳಿಕೆಗೆ ಸ್ವೀಕಾರರ್ಹವಲ್ಲ: ಬಾಬಾ ರಾಮ್‌ದೇವ್‌ ವಿರುದ್ಧ ಡೆಲ್ಲಿ ಹೈಕೋರ್ಟ್‌ ಗರಂ

Sampriya
ಮಂಗಳವಾರ, 22 ಏಪ್ರಿಲ್ 2025 (15:21 IST)
Photo Courtesy X
ನವದೆಹಲಿ: ಪತಂಜಲಿ ಸಂಸ್ಥಾಪಕ ಮತ್ತು ಯೋಗ ಗುರು ರಾಮ್‌ದೇವ್‌ ಅವರು ನೀಡಿದ್ದ ಶರಬತ್ ಜಿಹಾದ್ ಹೇಳಿಕೆಗೆ ದೆಹಲಿ ಹೈಕೋರ್ಟ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಹೇಳಿಕೆಯು ಅಸಮರ್ಥನೀಯ ಮತ್ತು ನ್ಯಾಯಾಲಯಕ್ಕೆ ಆಘಾತ ತಂದಿದೆ ಎಂದು ಹೇಳಿದೆ.

ಈ ತಿಂಗಳ ಆರಂಭದಲ್ಲಿ ಪತಂಜಲಿಯ ರೋಸ್ ಶರಬತ್ ಅನ್ನು ರಾಮ್‌ದೇವ್‌  ಪ್ರಾರಂಭಿಸಿದರು. ರೋಸ್‌ ಶರಬತ್‌ ಪ್ರಚಾರದ ವಿಡಿಯೊದಲ್ಲಿ ನಿಮಗೆ ಶರಬತ್ ನೀಡುವ ಕಂಪೆನಿಗಳಿದೆ. ಆದರೆ, ಆ ಕಂಪೆನಿಗಳು ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸಲಾಗುತ್ತದೆ. ಆದರೆ, ನೀವು ಪತಂಜಲಿಯ ರೋಸ್ ಶರಬತ್ ಕುಡಿದರೆ ಗುರುಕುಲಗಳು ನಿರ್ಮಾಣವಾಗುತ್ತವೆ, ಆಚಾರ್ಯ ಕುಲಂ ಅಭಿವೃದ್ಧಿಯಾಗುತ್ತದೆ, ಪತಂಜಲಿ ವಿಶ್ವವಿದ್ಯಾಲಯವು ವಿಸ್ತರಿಸುತ್ತದೆ ಎಂದು ಹೇಳಿದ್ದರು.

ಇದು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ನಂತರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡು, ಯಾವುದೇ ಬ್ರ್ಯಾಂಡ್‌ ಅಥವಾ ಸಮುದಾಯವನ್ನು ಉದ್ದೇಶಿಸಿ ಹೇಳಿಲ್ಲ ಎಂದಿದ್ದರು.

ರಾಮದೇವ್‌ ಅವರು ಪ್ರಚಾರ ವಿಡಿಯೊದಲ್ಲಿ ಯಾವುದೇ ಕಂಪೆನಿಯ ಹೆಸರನ್ನು ಹೇಳಿರಲಿಲ್ಲ. ಆದರೆ, ಹಮ್ದರ್ದ್ ರೂಹ್ ಅಫ್ಜಾವನ್ನು ಗುರಿಯಾಗಿಸಿಕೊಂಡಿದ್ದರು ಎಂದು ಹೇಳಲಾಗಿತ್ತು.

ಇದನ್ನು ಪ್ರಶ್ನಿಸಿ ಹಮ್ದರ್ದ್ ಕಂಪೆನಿಯು ಬಾಬಾ ರಾಮ್‌ದೇವ್‌ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿತ್ತು. ಮಂಗಳವಾರ ಹೈಕೋರ್ಟ್‌ಗೆ ಹಮ್ದರ್ದ್ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ,  ಇದು ಸಮುದಾಯದ ನಡುವೆ ಬಿರುಕು ಸೃಷ್ಟಿಸುವ ಪ್ರಕರಣವಾಗಿದೆ. ದ್ವೇಷ ಭಾಷಣವಾಗಿದೆ. ರಾಮ್‌ದೇವ್‌ ಅವರು ಇದು ಶರಬತ್‌ ಜಿಹಾದ್ ಎಂದು ಹೇಳಿದ್ದರು. ಅವರು ಅವರ ಉದ್ಯಮ ನೋಡಿಕೊಳ್ಳಲಿ, ನಮಗೇಕೆ ತೊಂದರೆ ಕೊಡುತ್ತಿದ್ದಾರೆ ಎಂದು ವಾದಿಸಿದರು.


 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments