Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪತಿಯ ಆರೋಗ್ಯ ವಿಚಾರಣೆಗಾಗಿ ಐದು ದಿನಗಳ ಪೆರೋಲ್ ಮೇಲೆ ಹೊರಬಂದಿದ್ದ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ, ಇಂದು ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜೈಲಿಗೆ ಮರಳಿದ್ದಾರೆ.
ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ, ಮೊದಲ ಬಾರಿಗೆ ಷರತ್ತು ಆಧಾರಿತ ಪೆರೋಲ್ ಮೇಲೆ ಹೊರಬಂದಿದ್ದರು.
ಅಕ್ಟೋಬರ್ 6 ರಂದು ಹೊರಬಂದಿದ್ದ ಶಶಿಕಲಾ, ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಪತಿ ನಟರಾಜನ್ ಯೋಗಕ್ಷೇಮ ವಿಚಾರಿಸಿ, ತಮ್ಮ ಸ್ನೇಹಿತೆ ಇಳವರಿಸಿ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದರು.
ಯಾವುದೇ ರಾಜಕೀಯ ಮುಖಂಡರನ್ನು ಭೇಟಿ ಮಾಡಬಾರದು. ಯಾವುದೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಾರದು ಎನ್ನುವುದು ಸೇರಿದಂತೆ ಕೆಲ ಷರತ್ತುಗಳನ್ನು ಶಶಿಕಲಾ ಅವರಿಗೆ ವಿಧಿಸಿ ಪೆರೋಲ್ ಮಂಜೂರು ಮಾಡಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.