ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಶಿವಸೇನೆ ಮೈತ್ರಿಕೂಟದಿಂದ ಹೊರಬೀಳಲಿದ್ದು, ಮುಂಬರುವ 2019 ರಲ್ಲಿ ನಡೆಯವಲಿರುವ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇಂದು ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಶಿವಸೇನೆ ಅಧ್ಯಕ್ಷ ಉದ್ಭವ್ ಠಾಕ್ರೆ , ಬಿಜೆಪಿಯೊಂದಿಗೆ ಮೈತ್ರಿ ಕಡಿದುಕೊಳ್ಳುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಪಕ್ಷದೊಂದಿಗೆ ಸಮ್ಮಿಶ್ರ ಸರಕಾರ ರಚಿಸಿರುವ ಶಿವಸೇನೆ, ಸದಾ ಬಿಜೆಪಿ ನಾಯಕರನ್ನು ಟೀಕಿಸುತ್ತಾ ಬಂದಿದ್ದು, ಮೈತ್ರಿಕೂಟದಿಂದ ಹೊರಬರುವ ಪಕ್ಷದ ನಿರ್ಧಾರ ಅಚ್ಚರಿಗೆ ಕಾರಣವಾಗಿಲ್ಲ ಎನ್ನಲಾಗುತ್ತಿದೆ.
ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ಹಲವಾರು ಬಾರಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಲ್ಲದೇ ಸರಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವುದಾಗಿ ಶಿವಸೇನೆ ಘೋಷಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.