Publish Date: Mon, 13 May 2019 (14:22 IST)
Updated Date: Mon, 13 May 2019 (14:24 IST)
ಕೋಲಾರ : ರಾಜ್ಯದಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನಡೆಯಬೇಕಿದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ.
ಸಮಾರಂಭವೊಂದರಲ್ಲಿ ಮಾತನಾಡಿದ ಮಂಜುನಾಥ್, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಆಡಳಿತ ಮಾಡಲು ಒಳ್ಳೆಯ ಈಡಿಯಾ ಇದೆ. ಆದರೆ ಅವರನ್ನು ಅಧಿಕಾರ ಮಾಡಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಐದು ವರ್ಷದ ಅವಧಿಯಲ್ಲಿ ಒಂದೇ ಒಂದು ಬಾರಿಯೂ ಚೆಕ್ ಬೌನ್ಸ್ ಆಗಿಲ್ಲ. ಅವರು ಕ್ಷೇತ್ರದ ಅಭಿವೃದ್ಧಿಗೆ ಕೇಳಿದಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದರು. ಇದು ಸಿದ್ದರಾಮಯ್ಯ ಆಡಳಿತದ ಪರಿ ಎಂದು ಹೊಗಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.