Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸೋನಿಯಾಗೆ ನೀಲನಕ್ಷೆ ಸಲ್ಲಿಸಿದ ಸಿದ್ದರಾಮಯ್ಯ

ಸೋನಿಯಾಗೆ ನೀಲನಕ್ಷೆ ಸಲ್ಲಿಸಿದ ಸಿದ್ದರಾಮಯ್ಯ
ಬೆಂಗಳೂರು , ಗುರುವಾರ, 7 ಅಕ್ಟೋಬರ್ 2021 (11:46 IST)
ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಯಾವ ರೀತಿಯ ಕಾರ್ಯತಂತ್ರ ರೂಪಿಸಬಹುದು ಎಂಬ ಬಗ್ಗೆ ಸೋನಿಯಾ ಗಾಂಧಿಯವರಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೀಲನಕ್ಷೆ ಸಲ್ಲಿಸಿ ಬಂದಿದ್ದಾರೆ.

ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ದೂರವಾಗಿರುವ ಮತ ಬ್ಯಾಂಕ್ ಮತ್ತೆ ಸೆಳೆಯುವ ನಿಟ್ಟಿನಲ್ಲಿ ಅನುಸರಿಸಬೇಕಾದ ಮಾರ್ಗಗಳ ಕುರಿತು ತಮ್ಮ ಅಭಿಪ್ರಾಯ ಹಾಗೂ ಯೋಜನೆ ಬಗ್ಗೆಯೂ ಸೋನಿಯಾ ಗಾಂಧಿಯವರ ಗಮನಕ್ಕೆ ತಂದಿದ್ದಾರೆ.
ಅಷ್ಟೇ ಅಲ್ಲದೆ, ಪಕ್ಷ ಸಂಘಟನೆ ಹಾಗೂ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಮುಂದಿನ ಏಪ್ರಿಲ್ನಿಂದ ರಾಜ್ಯ ಪ್ರವಾಸ ಹಾಗೂ ಸಮುದಾಯದವಾರು ಸಮಾವೇಶ ಕೈಗೊಳ್ಳುವ ಇಂಗಿತವನ್ನೂ ವ್ಯಕ್ತಪಡಿಸಿದರು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಕಾಂಗ್ರೆಸ್ನ ಸಾಂಪ್ರದಾಯಿಕ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಮತ ವಿಭಜನೆಯಿಂದ ಎರಡು ಚುನಾವಣೆಗಳಲ್ಲಿ ಹಿನ್ನೆಡೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಅದಕ್ಕೆ ಅವಕಾಶ ಇಲ್ಲದಂತೆ ಅಭ್ಯರ್ಥಿಗಳ ಆಯ್ಕೆಯಲ್ಲೂ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಹೇಳಿದರು ಎನ್ನಲಾಗಿದೆ.
ಸ್ವಂತ ಸಾಮರ್ಥ್ಯ ಹಾಗೂ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ಶಾಸಕರು ಸಂಪರ್ಕದಲ್ಲಿದ್ದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡರೆ ಪಕ್ಷ ಅಧಿಕಾರಕ್ಕೆ ಬರಲು ಸಹಾಯವಾಗಬಹುದು ಎಂಬ ಮಾಹಿತಿ ಹಾಗೂ ಹೆಸರುಗಳನ್ನೂ ನೀಡಿದ್ದಾರೆ ಎಂದು ಹೇಳಲಾಗಿದೆ.
ಸೋನಿಯಾ ಸಲಹೆ: ನಿಂದ ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಭಲೇ ನಾಟಕಕಾರ; ಸಿದ್ಧಾರ್ಥ್ ನಾಥ್ ಸಿಂಗ್ ಕಿಡಿ