Webdunia - Bharat's app for daily news and videos

Install App

ಸಿದ್ದೀಕಿ ಹತ್ಯೆ ಪ್ರಕರಣ: ಶೂಟರ್‌ಗಳಿಗೆ ಹಣ ಪೂರೈಕೆ, ಮತ್ತೊಬ್ಬ ಅರೆಸ್ಟ್‌

Sampriyಮa
ಮಂಗಳವಾರ, 15 ಅಕ್ಟೋಬರ್ 2024 (19:51 IST)
ಮುಂಬೈ: ಮಹಾರಾಷ್ಟ್ರದ ಎನ್‌ಸಿಪಿ ನಾಯಕ, ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ ಸಂಬಂಧ ಮತ್ತೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ವ್ಯಕ್ತಿಯನ್ನು ಹರೀಶ್‌ಕುಮಾರ್‌ ಬಾಲಕರಾಮ್‌ (23) ಎಂದು ಗುರುತಿಸಲಾಗಿದ್ದು, 21ರ ವರೆಗೆ ವಶದಲ್ಲಿ ಇರಿಸಿಕೊಳ್ಳಲಾಗುವುದು ಎಂದು ಮುಂಬೈ ಪೊಲೀಸರು ತಿಳಿಸಿದರು.

ಉತ್ತರ ಪ್ರದೇಶದ ಬಹರಾಯಿಚ್‌ ಮೂಲದ ಬಾಲಕರಾಮ್‌ ಅನ್ನು ಬಹರಾಯಿಚ್‌ನಲ್ಲಿ ಸೋಮವಾರ ಬಂಧಿಸಿ, ಮಂಗಳವಾರ ಬೆಳಿಗ್ಗೆ ಮುಂಬೈಗೆ ಕರೆತಂದಿದ್ದಾರೆ.

ಈತ ಪುಣೆಯಲ್ಲಿ ಗುಜರಿ ವ್ಯಾಪಾರಿಯಾಗಿದ್ದು, ಸಿದ್ದೀಕಿ ಹತ್ಯೆಗಾಗಿ ಶೂಟರ್‌ಗಳಿಗೆ ಹಣ ಮತ್ತು ಇತರ ಸಾಮಗ್ರಿಗಳನ್ನು ಪೂರೈಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟು ನಾಲ್ವರನ್ನು ಬಂಧಿಸಿದಂತಾಗಿದೆ. ಇದಕ್ಕೂ ಮುನ್ನ ಪೊಲೀಸರು, ಹರಿಯಾಣದ ನಿವಾಸಿ ಗುರ್ಮೈಲ್‌ ಬಲ್ಜಿತ್‌ ಸಿಂಗ್‌ (23), ಉತ್ತರ ಪ್ರದೇಶದ ಧರ್ಮರಾಜ್‌ ರಾಜೇಶ್‌ ಕಶ್ಯಪ್‌ (19) ಮತ್ತು ಪುಣೆಯ ಸಹ ಸಂಚುಕೋರ ಪ್ರವೀಣ್‌ ಲೋಣಕರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮತ್ತೊಬ್ಬ ಶಂಕಿತ ಶೂಟರ್‌ ಶಿವಕುಮಾರ್‌ ಗೌತಮ್‌ ಮತ್ತು ಆರೋಪಿ ಮೊಹಮ್ಮದ್‌ ಜಿಶನ್‌ ಅಖ್ತರ್‌ಗಾಗಿ ಶೋಧ ಮುಂದುವರಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments