ನವದೆಹಲಿ: ಕೃಷಿ ಕಾಯ್ದೆ ವಿರೋಧಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪೊಲೀಸರ ಮೇಲೆ ತಲ್ವಾರ್ ಬೀಸಿ ದಾಳಿ ನಡೆಸಿದ ವ್ಯಕ್ತಿ ಸೇರಿದಂತೆ 44 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಿಂಘು ಗಡಿಯಲ್ಲಿ ಸ್ಥಳೀಯರು ಮತ್ತು ರೈತರ ನಡುವೆ ಘರ್ಷಣೆಯಾಗಿದ್ದು, ಕಲ್ಲು ತೂರಾಟವಾಗಿದೆ. ಈ ವೇಳೆ ವ್ಯಕ್ತಿಯೊಬ್ಬ ಪೊಲೀಸರ ಮೇಲೆ ತಲ್ವಾರ್ ನಿಂದ ದಾಳಿ ಮಾಡಿದ್ದ. ಈ ವ್ಯಕ್ತಿಯನ್ನು ಈಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ ಎನ್ನಲಾಗಿದೆ.