ನವದೆಹಲಿ: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮಗನೇ ತನ್ನ 52 ವರ್ಷದ ತಂದೆಯನ್ನು ಕತ್ತು ಸೀಳಿ ಹತ್ಯೆ ಮಾಡಿದ ಪ್ರಕರಣ ದೆಹಲಿಯಲ್ಲಿ ನಡೆದಿದೆ.
ತಂದೆ ವಿದ್ಯುತ್ ಬಿಲ್ ಕಟ್ಟಲಿಲ್ಲವೆಂಬ ವಿಚಾರಕ್ಕೆ ಇಬ್ಬರ ನಡುವೆ ಜಗಳ ತಾರಕಕ್ಕೇರಿತು ಎನ್ನಲಾಗಿದೆ. ಕೊನೆಗೆ ಮಗ ತಂದೆಯ ಕತ್ತಿಗೆ ಚಾಕುವಿನಿಂದ ಇರಿದಿದ್ದಾನೆ. ಈ ಸಂಬಂಧ 25 ವರ್ಷದ ಆರೋಪಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರ ನಡುವೆ ಆಗಾಗ ಹಲವು ವಿಚಾರಕ್ಕೆ ಕಲಹವಾಗುತ್ತಿತ್ತು. ಆದರೆ ಈ ಬಾರಿ ಅದು ಅತಿರೇಕಕ್ಕೆ ಹೋಗಿದೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.