Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ನವದೆಹಲಿ , ಶನಿವಾರ, 28 ಅಕ್ಟೋಬರ್ 2017 (08:17 IST)
ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಟ್ಟೆನೋವಿನಿಂದ ಬಳಲುತ್ತಿದ್ದ ಸೋನಿಯಾ, ನಿನ್ನೆ ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿಯ ಆರೋಗ್ಯದ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ, "ಶುಕ್ರವಾರ ಅಮ್ಮ ಶಿಮ್ಲಾಕ್ಕೆ ತೆರಳಿದ್ದಾಗ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ದೆಹಲಿಗೆ ಕರೆತರಲಾಗಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ' ಎಂದು ಟ್ವೀಟ್ ಮಾಡಿದ್ದಾರೆ.

ಅನಾರೋಗ್ಯದಿಂದಾಗಿ ಸೋನಿಯಾ ಆಸ್ಪತ್ರೆಗೆ ದಾಖಲಾಗುತ್ತಿರುವುದು ಈ ವರ್ಷದಲ್ಲಿ ಇದು 3ನೇ ಬಾರಿ. ಜನವರಿಯಲ್ಲಿ ಜ್ವರ ಹಾಗೂ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಮೇ ತಿಂಗಳಲ್ಲಿ ಆಹಾರ ಸಮಸ್ಯೆಯಿಂದಾಗಿ ಮತ್ತೆ ಆಸ್ಪತ್ರೆಯಲ್ಲಿ ಕೆಲ ದಿನ ಚಿಕಿತ್ಸೆ ಪಡೆದಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಈ ಕ್ರೀಡೆಯಲ್ಲಿ ಚಾಂಪಿಯನ್ ಅಂತೆ!