ನವದೆಹಲಿ: ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿಪಕ್ಷ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಕೆಲವು ಸಲಹೆ ನೀಡಿದ್ದಾರೆ.
ಸದ್ಯಕ್ಕೆ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ವ್ಯಾಕ್ಸಿನ್ ನೀಡಲಾಗುತ್ತಿದೆ. ಆದರೆ ಈಗ ಯುವ ಜನಾಂಗದಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ 25 ವರ್ಷ ಮೇಲ್ಪಟ್ಟವರಿಗೂ ವ್ಯಾಕ್ಸಿನ್ ನೀಡಲು ಕ್ರಮ ಕೈಗೊಳ್ಳಿ ಎಂದು ಸೋನಿಯಾ ಸಲಹೆ ನೀಡಿದ್ದಾರೆ.
ಇನ್ನು, ಜೀವ ರಕ್ಷಕ ಸಾಧನಗಳು, ಔಷಧಗಳಿಗೆ ಜಿಎಸ್ ಟಿ ವಿನಾಯ್ತಿ ನೀಡಿ ಎಂದೂ ಸೋನಿಯಾ ಸಲಹೆ ನೀಡಿದ್ದಾರೆ. ಕಾಂಗ್ರೆಸ್ ಆಳ್ವಿಕೆಯ ಸಿಎಂಗಳ ಜೊತೆ ಸಭೆ ನಡೆಸಿದ ಬಳಿಕ ಸೋನಿಯಾ ಈ ಅಭಿಪ್ರಾಯ ಹೊರಹಾಕಿದ್ದಾರೆ. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಗೆ ಪತ್ರ ಬರೆದಿರುವುದಾಗಿಯೂ ಅವರು ಹೇಳಿದ್ದಾರೆ.