ನವದೆಹಲಿ: ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯಲಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಇಷ್ಟು ದಿನ ತೆರೆ ಮರೆಯಿಲ್ಲಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕೈಗೆ ಮತ್ತೆ ಬಲ ಬಂದಂತಾಗಿದೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ದೇಶದ ಹಲವು ರಾಜಕೀಯ ಪಕ್ಷಗಳು ಕಾಂಗ್ರೆಸ್ ನಾಯಕಿಯನ್ನು ಭೇಟಿಯಾಗುತ್ತಿದ್ದು, ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಬಲ್ಲ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸಲು ಪ್ರಯತ್ನಿಸುತ್ತಿವೆ.
ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಮುಂದುವರಿಸಬೇಕೆಂಬ ಇಚ್ಛೆ ಕಾಂಗ್ರೆಸ್ ಗಿದ್ದರೂ, ಅದಕ್ಕೆ ಪ್ರಧಾನಿ ಮೋದಿ ಒಪ್ಪಿಗೆ ಬೇಕಾಗಿದೆ. ಆದರೆ ಅದಕ್ಕೆ ಅವರು ಒಪ್ಪುವ ಸಾಧ್ಯತೆಯಿಲ್ಲ. ಹೀಗಾಗಿ ನೀವೇ ಒಬ್ಬ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಪ್ರಮುಖ ವಿಪಕ್ಷಗಳು, ಸೋನಿಯಾ ಗಾಂಧಿಯನ್ನು ಒತ್ತಾಯಿಸಿದ್ದಾರೆ. ಹಾಗಾಗಿ ವಿಪಕ್ಷಗಳ ಜುಟ್ಟು ಸೋನಿಯಾ ಕೈಗೆ ಬಂದಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ