ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧಾರ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಡಿ.9ರಂದು ಸೋನಿಯಾ ಗಾಂಧಿಯವರು 73 ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಚರಿಸಲು ಸಿದ್ಧತೆ ನಡೆಸಲು ಮುಂದಾಗಿದ್ದಾರೆ.
ಆದರೆ ಇತ್ತೀಚೆಗೆ ದೇಶದಲ್ಲಿ ಮಹಿಳೆಯರ ಮೇಲಿನ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಸೋನಿಯಾ ಗಾಂಧಿ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.