ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 26ನೇ ಪುಣ್ಯತಿಥಿ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ಪುತ್ರಿ ಪ್ರಿಯಾಂಕಾ ಗಾಂಧಿ ಮತ್ತು ರಾಬರ್ಟ್ ವಾದ್ರಾ ರಾಹುಲ್ ಗಾಂಧಿಯವರ ಸ್ಮಾರಕವಿರುವ ವೀರ್ ಭೂಮಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು.
ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಕೂಡ ಅಗಲಿದ ಹಿರಿಯ ನಾಯಕನಿಗೆ ಗೌರವ ನಮನ ಸಲ್ಲಿಸಿದರು.
ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ಅಂಗವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಸಹಿ ಅಭಿಯಾನವನ್ನು ಹಮ್ಮಿಕೊಂಡಿದ್ದು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿದೆ. ಮಹಿಳಾ ಕಾಂಗ್ರೆಸ್ ಈ ನಿಟ್ಟಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.