ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ರಾಷ್ಟ್ರಾಧ್ಯಕ್ಷರಾಗಿ ಬಡ್ತಿ ನೀಡಲಾಗುತ್ತಿದೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ನಾಯಕ ಎಂ.ವೆಂಕಯ್ಯನಾಯ್ಡು, ಸೋನಿಯಾ ಗಾಂಧಿಯವರಿಗೆ ಪಕ್ಷದಲ್ಲಿ ಒಗ್ಗಟ್ಟು ತರುವ ಶಕ್ತಿಯಿದೆ. ಇಲ್ಲವಾದಲ್ಲಿ ಪಕ್ಷ ಒಡೆದು ಛಿದ್ರವಾಗಲಿದೆ ಎಂದು ಹೇಳಿದ್ದಾರೆ.
ನಾಯಕತ್ವ ಕಾಂಗ್ರೆಸ್ ಪಕ್ಷದ ಅಂತರಿಕ ವಿಚಾರವಾಗಿದೆ. ಸೋನಿಯ ಗಾಂಧಿಯವರ ಬಳಿ ಕಾಂಗ್ರೆಸ್ ನಾಯಕರಲ್ಲಿ ಏಕತೆಯನ್ನು ತರುವ ಶಕ್ತಿಯಿದೆ. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿನ ಕೊರತೆ ಎದುರಾಗಲಿದೆ ಎಂದು ನನ್ನ ವ್ಯಯಕ್ತಿಕ ಅನಿಸಿಕೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ವಂಶಪರಂಪರೆ ಮಾರಕ. ಆದರೆ, ಕಾಂಗ್ರೆಸ್ ಪಕ್ಷದ ಸದಸ್ಯರಿಗೆ ಮತ್ತು ಬೆಂಬಲಿಗರಿಗೆ ಅದೊಂದು ಸಮಸ್ಯೆಯಾಗಿಲ್ಲ. ಆದರೆ, ವಾಸ್ತವತೆಯನ್ನು ಒಪ್ಪಿಕೊಳ್ಳಬೇಕಾಗಿದೆ. ಸೋನಿಯಾ ಕಾಂಗ್ರೆಸ್ ಪಕ್ಷದಲ್ಲಿ ಏಕತೆಯ ಸಂಕೇತವಾಗಿದ್ದಾರೆ ಎಂದರು.
ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗಳ ಸೋಲಿನ ನಂತರ ಆತ್ಮವಿಮರ್ಶೆ ಮಾಡಿಕೊಳ್ಳಲಾಗುವುದು ಎನ್ನುವ ಸೋನಿಯಾ ಗಾಂಧಿಯವರ ಹೇಳಿಕೆ ಅವರ ಪಕ್ಷಕ್ಕೆ ಸಂಬಂಧಿಸಿದ ಸಂಗತಿಯಾಗಿದೆ ಎಂದು ಬಿಜೆಪಿ ಮುಖಂಡ ಎಂ.ವೆಂಕಯ್ಯನಾಯ್ಡು ತಿಳಿಸಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.