ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಪ್ರಮುಖ ಎದುರಾಳಿಯಾಗಿದ್ದು, ಬಿಜೆಪಿಯಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಸರಕಾರದ ದುರಾಡಳಿತ ಪ್ರಮುಖ ವಿಷಯವಾಗಲಿದ್ದು, ಉತ್ತರಪ್ರದೇಶದಲ್ಲಿ ಬಿಜೆಪಿ ಅದಿಕಾರ ಹಿಡಿಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಮಾಜವಾದಿ ಪಕ್ಷಕ್ಕೆ ಬೇರುಮಟ್ಟದ ಬಲವಾದ ಕಾರ್ಯಕರ್ತರ ಪಡೆಯಿರುವುದರಿಂದ ಬಿಜೆಪಿ ಪಕ್ಷಕ್ಕೆ ಪ್ರಮುಖ ಎದುರಾಳಿಯಾಗಲಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆಸ್ಸಾಂ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದಂತೆ ಉತ್ತರಪ್ರದೇಶದಲ್ಲಿ ಕೂಡಾ ಸಿಎಂ ಅಭ್ಯರ್ಥಿಯನ್ನು ಘೋಷಿಸಲಾಗುವುದೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಅಭ್ಯರ್ಥಿಯ ಬಗ್ಗೆ ಸಂಸದೀಯ ಮಂಡಳಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದು, ಇಲ್ಲಿಯವರೆಗೆ ಅಂತಿಮ ನಿರ್ಧಾರವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸದಿದ್ದರಿಂದ ಹೀನಾಯ ಸೋಲು ಕಂಡ ನಂತರ ಬಿಜೆಪಿ ಆಸ್ಸಾ ರಾಜ್ಯದಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿತ್ತು.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.