ಲಕ್ನೋ: ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು, ಮುಂದಿನ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರೋದು ಎಂದು ಸಮಾಜವಾದಿ ಪಕ್ಷದ ಶಾಸಕ ಮೆಹಬೂಬ್ ಅಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದೀಗ ಶಾಸಕ ಮೆಹಬೂಬ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಜ್ನೋರ್ ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೆಹಬೂಬ್ 850 ವರ್ಷಗಳ ಕಾಲ ಮೊಘಲರು ದೇಶ ಆಳಿದ್ದಾರೆ. ಜನರು ಎಚ್ಚೆತ್ತುಕೊಂಡಿದ್ದಾರೆ ಎಂದು ಈ ದೇಶವನ್ನು ಸುಡುತ್ತಿರುವವರು ಅರ್ಥ ಮಾಡಿಕೊಳ್ಳಬೇಕು. ಲೋಕಸಭೆ ಚುನಾವಣೆಯಲ್ಲಿ ಜನ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನೀವು ಅಧಿಕಾರ ಕಳೆದುಕೊಳ್ಳುತ್ತೀರಿ. ಮುಸ್ಲಿಮರ ಜನಸಂಖ್ಯೆ ಏರುತ್ತಿದೆ. ಮುಂದಿನ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರೋದು ಎಂದಿದ್ದಾರೆ. ಅವರ ಈ ಧ್ವೇಷ ಭಾಷಣ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದೆಡೆ ಎಸ್ ಪಿ ನಾಯಕನ ಹೇಳಿಕೆ ಪ್ರಶ್ನಿಸಿರುವ ಬಿಜೆಪಿ, ಇದೇನಾ ನಿಮ್ಮ ಮೊಹಬ್ಬತ್ ಕೀ ದೂಕಾನ್ ಎಂದು ಟೀಕಿಸಿದೆ. ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಇದೇ ರೀತಿ ಹಿಂದೂಗಳನ್ನು ಒಡೆದು ಮುಸ್ಲಿಮರನ್ನು ಓಲೈಕೆ ಮಾಡಿಯೇ ಇದುವರೆಗೂ ಅಧಿಕಾರ ಪಡೆದುಕೊಂಡಿದೆ ಎಂದು ಟೀಕಿಸಿದೆ.