ಪಶ್ಚಿಮ ಬಂಗಾಳ: ಇಲ್ಲಿನ ಜಲಪೈಗುರಿ ಜಿಲ್ಲೆಯ ಹಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುತ್ತಿದೆ. ಮಳೆ ಸಂಬಂಧಿತ ಅವಘಡದಲ್ಲಿ ಸಾವು, ನೋವುಗಳ ಸಂಖ್ಯೆ ಹೆಚ್ಚುತ್ತಿದೆ. ಈಗಾಗಲೇ ಐದು ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.
ಭಾನುವಾರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ಜಲಪೈಗುರಿ ಜಿಲ್ಲೆಯ ರಾಜರ್‌ಹಾಟ್, ಬರ್ನಿಷ್, ಬಾಕಲಿ, ಜೋರ್‌ಪಕಡಿ, ಮಾಧಬ್‌ಡಾಂಗಾ, ಸಪ್ತಿಬಾರಿ ಪ್ರದೇಶಗಳಲ್ಲಿ ಹೆಚ್ಚು ಹಾನಿಯಾಗಿದೆ. ಭಾನುವಾರ ತಡರಾತ್ರಿ ಜಲಪೈಗುರಿ ಜಿಲ್ಲೆಗೆ ಧಾವಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಗತ್ಯ ನೆರವು ನೀಡುವ ಭರವಸೆ ನೀಡಿದರು.
ಮಳೆ ಸಂಬಂಧಿತ ಅವಘಡದಲ್ಲಿ ಐವರು ಮೃತಪಟ್ಟಿದ್ದಾರೆ. ಗಾಯಗೊಂಡವರ ಸಂಖ್ಯೆಯೂ ಹೆಚ್ಚಾಗಿದೆ. ಮೃತರ ಕುಟುಂಬ ಸದಸ್ಯರನ್ನು ಮತ್ತು ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯ ನೆರವು ನೀಡಲಾಗುವುದು ಎಂದು ಮಮತಾ ಹೇಳಿದ್ದಾರೆ.
ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಸ್ಯ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಬಗ್ಗೆ ಏನನ್ನೂ ಹೇಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ.<>