Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Sampriya
ಶನಿವಾರ, 7 ಜೂನ್ 2025 (19:44 IST)
Photo Courtesy X
ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ಗುಂಪೊಂದು ನಡೆಸಿದ ಭೀಕರ ದಾಳಿಯಲ್ಲಿ 13 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.

ದಾಳಿ ಎಷ್ಟು ಭೀಕರವಾಗಿತ್ತೆಂದರೆ, ನಾಯಿಗಳು ಅವನ ಮುಖವನ್ನು ಕಚ್ಚಿ ಚರ್ಮವನ್ನು ಕಿತ್ತಿರುವುದರಿಂದ  ಅಸ್ಥಿಪಂಜರಗಳು ಗೋಚರಿಸುತ್ತಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ತಂದೆ ಸಂತೋಷ್ ಪಾಸ್ವಾನ್ ಪೊಲೀಸರಿಗೆ ತಿಳಿಸಿದ್ದು, ಪೂಜಾ ಸ್ಥಳಕ್ಕೆ ನಡೆದುಕೊಂಡು ಹೋಗುತ್ತಿದ್ದ ಗ್ರಾಮಸ್ಥರ ಗುಂಪಿನೊಂದಿಗೆ ನಾವು ಇದ್ದೆವು. ಆ ಹುಡುಗ ತಮ್ಮ ಹಿಂದೆ ಸ್ವಲ್ಪ ದೂರ ನಡೆಯುತ್ತಿದ್ದ.

ಅವನನ್ನು ಒಬ್ಬಂಟಿಯಾಗಿ ನೋಡಿ, ಬೀದಿ ನಾಯಿಗಳು ಅವನ ಕಡೆಗೆ ಧಾವಿಸಿ ಬಂದು ಇದ್ದಕ್ಕಿದ್ದಂತೆ ಅವನ ಮೇಲೆ ದಾಳಿ ಮಾಡಿದವು ಎಂದು ಪೊಲೀಸರು ತಿಳಿಸಿದ್ದಾರೆ. ಜನರು ಬೀದಿ ನಾಯಿಗಳನ್ನು ಓಡಿಸುವಷ್ಟರಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಅವರು ಹೇಳಿದರು.

ಕೋಪಗೊಂಡ ಗ್ರಾಮಸ್ಥರು ಗ್ರಾಮದ ಮುಖ್ಯ ರಸ್ತೆಯನ್ನು ತಡೆದು ಪೊಲೀಸರು ತಡವಾಗಿ ಬಂದಿದ್ದಾರೆ ಎಂದು ಆರೋಪಿಸಿದರು. ಅವರು ಘೋಷಣೆಗಳನ್ನು ಕೂಗಿದರು ಮತ್ತು ಮಗುವಿನ ಕುಟುಂಬಕ್ಕೆ ಪರಿಹಾರವನ್ನು ಒತ್ತಾಯಿಸಿದರು.

ಒಂದು ತಿಂಗಳ ಹಿಂದೆ, ಅದೇ ಪ್ರದೇಶದಲ್ಲಿ 15-20 ಬೀದಿ ನಾಯಿಗಳು ನಡೆಸಿದ ದಾಳಿಯಲ್ಲಿ ಬಾಲಕಿಯೊಬ್ಬಳು ತೀವ್ರವಾಗಿ ಗಾಯಗೊಂಡಿದ್ದಳು. ಆಸ್ಪತ್ರೆಗೆ ಕರೆದೊಯ್ಯುವಾಗ ಆಕೆ ಸಾವನ್ನಪ್ಪಿದ್ದಳು.

ಈ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ದಸರಾ-ದೀಪಾವಳಿಗೆ ಕರ್ನಾಟಕಕ್ಕೆ ₹3705 ಕೋಟಿ ಕೇಂದ್ರದ ಕೊಡುಗೆ: ಪ್ರಲ್ಹಾದ ಜೋಶಿ

Karnataka Weather: ಮೂರು ದಿನ ವರುಣನ ಆರ್ಭಟ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ವಿಶ್ವವಿಖ್ಯಾತ ಜಂಬೂಸವಾರಿಗೆ ಮೈಸೂರು ಸಜ್ಜು: ಆರನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು

ಮುಂದಿನ ಸುದ್ದಿ
Show comments