Publish Date: Sun, 05 Mar 2023 (12:58 IST)
Updated Date: Sun, 05 Mar 2023 (13:00 IST)
ನವದೆಹಲಿ : ವಿಕೃತಕಾಮಿಯೊಬ್ಬ ಬೀದಿ ಹೆಣ್ಣು ನಾಯಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಅಮಾನವೀಯ ಘಟನೆ ದೆಹಲಿಯ ಇಂದರ್ ಪುರಿಯಲ್ಲಿ ನಡೆದಿದೆ.
ಯುವಕನೊಬ್ಬ ಹೆಣ್ಣುನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಪ್ರಾಣಿ ಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮುಕ ಯುವಕನನ್ನ ದೆಹಲಿ ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಈತ ಇಂದರ್ಪುರಿಯ ಬಿಬ್ಲಾಕ್ ನಂ.333 ರಲ್ಲಿ ವಾಸವಾಗಿದ್ದಾನೆ. ಕೆಲ ದಿನಗಳ ಹಿಂದೆ ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದು, ಇದೀಗ ವೀಡಿಯೋ ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಈ ಸಂಬಂಧ ಇಂದರ್ ಪುರಿ ಪೊಲೀಸರು ಐಪಿಸಿ ಸೆಕ್ಷನ್ 377 (ಅನೈಸರ್ಗಿಕ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.